Home ಟಾಪ್ ಸುದ್ದಿಗಳು ‘ಇಂಡಿಯಾ’ ಅಧಿಕಾರಕ್ಕೆ ಬಂದರೆ ಇವಿಎಂ ಯಂತ್ರಗಳನ್ನು ನದಿಗೆ ಎಸೆಯುತ್ತೇವೆ: ಫಾರೂಕ್ ಅಬ್ದುಲ್ಲಾ

‘ಇಂಡಿಯಾ’ ಅಧಿಕಾರಕ್ಕೆ ಬಂದರೆ ಇವಿಎಂ ಯಂತ್ರಗಳನ್ನು ನದಿಗೆ ಎಸೆಯುತ್ತೇವೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ಲೋಕಸಭೆ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಇವಿಎಂ ಯಂತ್ರಗಳನ್ನು ನದಿಗೆ ಎಸೆಯುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.

ತಮ್ಮ ಪಕ್ಷದ ಅಭ್ಯರ್ಥಿ ಪರ ಚಿನಾವಣಾ ಸಮಾವೇಶದಲ್ಲಿ ಮಾತನಾಡಿದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಇವಿಎಂಗಳನ್ನು ಜಗತ್ತಿನ ಬೇರೆ ಯಾವ ದೇಶಗಳು ಕೂಡ ಬಳಸುತ್ತಿಲ್ಲ. ಆದರೆ, ಇಲ್ಲಿ ನಮ್ಮ ಮೇಲೆ ಬಲವಂತವಾಗಿ ಬಳಸುವಂತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಶ್ರೀನಗರ ಕ್ಷೇತ್ರದ ಹಾಲಿ ಸಂಸದರಾಗಿರುವ ಅಬ್ದುಲ್ಲಾ ತಮ್ಮ ಆರೋಗ್ಯದ ಕಾರಣದಿಂದ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಅವರು ತಮ್ಮ ಪಕ್ಷದ ಅಭ್ಯರ್ಥಿ ಆಗಾ ಸೈಯದ್ ರುಹುಲ್ಲಾ ಮೆಹದಿ ಪರ ಪ್ರಚಾರ ನಡೆಸುತ್ತಿದ್ದಾರೆ. ಫಾರೂಕ್ ಅಬ್ದುಲ್ಲಾ ಅವರ ಪಕ್ಷ ‘ಇಂಡಿಯಾ’ ಮೈತ್ರಿಕೂಟದಲ್ಲಿದೆ.

Join Whatsapp
Exit mobile version