ಭಾರತ ಏಷ್ಯಾಕಪ್’ಗೆ ಬರದಿದ್ದರೆ, ಪಾಕಿಸ್ತಾನ 2023ರ ವಿಶ್ವಕಪ್’ಗೆ ಹೋಗುವುದಿಲ್ಲ: ಪಿಸಿಬಿ ಮುಖ್ಯಸ್ಥ ರಮೀಝ್ ರಾಜಾ

Prasthutha|

ಇಸ್ಲಾಮಾಬಾದ್: ಮುಂಬರುವ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬಾರದಿದ್ದರೇ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ನಾವೂ ಕೂಡ ಬರುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ರಮೀಝ್ ರಾಜಾ ಹೇಳಿದ್ದಾರೆ.

- Advertisement -

ಈ ಕುರಿತು ಮಾತನಾಡಿರುವ ಅವರು, ಒಂದು ವೇಳೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್’ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಬಾರಿಯೂ ಏಷ್ಯಾಕಪ್ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭಾರತ ಬರುವುದಿಲ್ಲ ಎಂಬ ಕಾರಣಕ್ಕಾಗಿ ಈ ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಸರ್ಕಾರದಿಂದ ಅನುಮತಿ ಸಿಗುವವರೆಗೆ ಪಾಕಿಸ್ತಾನ ತಂಡ ಭಾರತ ಪ್ರವಾಸ ಮಾಡುವುದಿಲ್ಲ. ಭಾರತ ತಂಡ ಇಲ್ಲಿಗೆ ಬಂದರೆ ಮಾತ್ರ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿ ವಿಶ್ವಕಪ್ ಆಡಲಿದೆ. ಒಂದು ವೇಳೆ ಟೀಂ ಇಂಡಿಯಾ ಬರದಿದ್ದರೆ, ಅವರು ನಾವಿಲ್ಲದೆ (ಪಾಕಿಸ್ತಾನ ತಂಡ) ವಿಶ್ವಕಪ್ ಆಡಬೇಕಾಗುತ್ತದೆ. ನಾವೂ ಕೂಡ ಕಠಿಣ ನಿಲುವು ತೆಗೆದುಕೊಳ್ಳಲು ಬದ್ಧರಿದ್ದೇವೆ. ನಮ್ಮ ತಂಡ ಉತ್ತಮ ಆಟ ಪ್ರದರ್ಶಿಸುತ್ತಿದೆ. ಅಲ್ಲದೆ ನಾವು ನಮ್ಮ ಮಂಡಳಿಯ ಆರ್ಥಿಕ ಸ್ಥಿತಿಯನ್ನು ಸಹ ಸುಧಾರಿಸಬೇಕಾಗಿದೆ ಎಂದರು.

- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಏಷ್ಯಾಕಪ್‌ಗೆ ಟೀಂ ಇಂಡಿಯಾ ಹೋಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತ್ತು.



Join Whatsapp