ಬೆಂಗಳೂರು: 2023 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ವಿರುದ್ಧ ನಿರ್ಣಯ ಕೈಗೊಳ್ಳುತ್ತೇವೆ. ಮಕ್ಕಳ ಪ್ರಾಣಕ್ಕೆ ಅಪಾಯವೊಡ್ಡಿ ಜೇಬು ತುಂಬಿಸುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತೇವೆ ಎಂದು ಮಾಜಿ ಸಿ ಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
‘ನೀಟ್ ಫೇಲ್ ಆದವರು ವಿದೇಶಕ್ಕೆ ತೆರಳಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದಾರೆ. ವಿದೇಶಕ್ಕೆ ತೆರಳಿರುವವರು ದ್ರೋಹಿಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ಗುಣಮಟ್ಟವನ್ನು ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಬಂದ ಮೇಲೆ ಬಡ ಮಧ್ಯಮ ವರ್ಗದ ಮಕ್ಕಳಿಗೆ ತುಂಬಾ ಅನ್ಯಾಯವಾಗಿದೆ. ಟ್ಯೂಷನ್ ಹೆಸರಲ್ಲಿ ಪೋಷಕರ ಲಕ್ಷಗಟ್ಟಲೆ ಹಣ ಪೋಲಾಗುತ್ತಿವೆ. ಪ್ರತ್ಯಕ್ಷವಾಗಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಚಕಾರವೆತ್ತದ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ ಎಂದು ಕೆಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.