Home ಟಾಪ್ ಸುದ್ದಿಗಳು ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ‘ಒಂದು ರಾಷ್ಟ್ರ-ಒಂದು ಚುನಾವಣೆ’ ವ್ಯವಸ್ಥೆ ಜಾರಿ: ರಾಜನಾಥ್ ಸಿಂಗ್

ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ‘ಒಂದು ರಾಷ್ಟ್ರ-ಒಂದು ಚುನಾವಣೆ’ ವ್ಯವಸ್ಥೆ ಜಾರಿ: ರಾಜನಾಥ್ ಸಿಂಗ್

ನವದೆಹಲಿ: ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ‘ಒಂದು ರಾಷ್ಟ್ರ-ಒಂದು ಚುನಾವಣೆ’ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಜಮ್ಮಲಮಡುಗುನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದಲ್ಲಿ ಎನ್ಡಿಎ) ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು. ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಜೊತೆಗೆ ಲೋಕಸಭಾ ಚುನಾವಣೆಯೂ ನಡೆಯುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ ‘ಒಂದು ರಾಷ್ಟ್ರ-ಒಂದು ಚುನಾವಣೆ’ಯನ್ನು ಜಾರಿಗೆ ತರುವುದು ನಮ್ಮ ಬದ್ಧತೆಯಾಗಿದೆ, ಇದರಿಂದ ಸಮಯ ಮತ್ತು ಶಕ್ತಿಯನ್ನು ಉಳಿಸಬಹುದು ಎಂದು ಹೇಳಿದರು.

Join Whatsapp
Exit mobile version