ಈಗ ಅಲ್ಲದಿದ್ದರೆ ಮತ್ತಿನ್ಯಾವಾಗ ? ಬುಲ್ಡೋಝರ್ ಕಾರ್ಯಾಚರಣೆಗೆ ‘ಸುಪ್ರೀಂ’ ಮೌನದ ಬಗ್ಗೆ ಸಂಸದೆ ಮೆಹುವಾ ಮೊಯಿತ್ರಾ

Prasthutha|

ನವದೆಹಲಿ: ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಉತ್ತರ ಪ್ರದೇಶ ಸರಕಾರ ಬುಲ್ಡೋಝರ್ ಕಾರ್ಯಾಚರಣೆ ನಡೆಸುತ್ತಿರುವುದರ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಬುಲ್ಡೋಝರ್ ಕಾರ್ಯಾಚರಣೆಯ ವಿರುದ್ಧ ಕಿಡಿಕಾರಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈಗಲಾದರೂ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

- Advertisement -

ಬುಲ್ಡೋಜರ್‌ ಆಡಳಿತದ ಕಾರ್ಯಾಚರಣೆ ವಿರುದ್ಧ ಗೌರವಾನ್ವಿತ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬಹುದೇ? ಈಗ ಅಲ್ಲದಿದ್ದರೆ ಮತ್ತಿನ್ಯಾವಾಗ?’ ಎಂದು ಟ್ವಿಟ್ ಮೂಲಕ ಪ್ರಶ್ನಿಸಿದ್ದಾರೆ. ಅಲ್ಲದೇ ಬುಲ್ಡೋಜರ್‌ ಬಳಸಿ ಮನೆಗಳನ್ನು ನೆಲಸಮ ಮಾಡುವ ಘಟನೆಗಳ ಬಗೆಗೆ ಸ್ವಯಂಪ್ರೇರಿತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದೂ ಮನವಿ ಮಾಡಿದ್ದಾರೆ.

ಪ್ರವಾದಿ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಮತ್ತು ನವೀನ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶವ್ಯಾಪಿ ಪ್ರತಿಭಟನೆಯ ಕಿಚ್ಚು ನಡೆಯುತ್ತಿದ್ದು, ಕೆಲವೆಡೆ ಪ್ರತಿಭಟನೆ ವಿಕೋಪಕ್ಕೆ ತೆರಳಿದೆ.

Join Whatsapp