ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣ ಕೂಡ ನಿಲ್ಲುತ್ತದೆ: ಸುಪ್ರೀಂಕೋರ್ಟ್

Prasthutha|

ನವದೆಹಲಿ: ದ್ವೇಷದ ಭಾಷಣಗಳ ವಿರುದ್ಧ ಮತ್ತೊಮ್ಮೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದ ಕ್ಷಣದಲ್ಲಿ ಅಂತಹ ಭಾಷಣಗಳು ದೂರವಾಗುತ್ತವೆ ಎಂದು ಬುಧವಾರ ಹೇಳಿದೆ.
ಎಷ್ಟು ಮಂದಿಯ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಪ್ರಾರಂಭಿಸಬಹುದು ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠ, ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿದೆ.
ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಉಲ್ಲೇಖಿಸಿದ ಪೀಠ, ದೂರದ ಪ್ರದೇಶಗಳು ಮತ್ತು ಮೂಲೆ ಮೂಲೆಗಳಿಂದ ಜನರು ಅವುಗಳನ್ನು ಕೇಳಲು ಸೇರುತ್ತಿದ್ದರು ಎಂದು ಹೇಳಿದರು.
ಕೋಮು ವಿಚಾರವುಳ್ಳವರಿಂದ ಕೆಲ ದ್ವೇಷದ ಭಾಷಣಗಳನ್ನು ಮಾಡಲಾಗುತ್ತಿದೆ, ಜನರು ತಮ್ಮನ್ನು ತಾವು ನಿಗ್ರಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Join Whatsapp