ಸುಧಾಕರ್‌ಗೆ ಬಿಜೆಪಿ ಟಿಕೆಟ್ ಕೊಟ್ಟರೆ ಕಾಂಗ್ರೆಸ್‌ನಿಂದ ನಾನೂ ಸ್ಪರ್ಧೆ: ಪ್ರದೀಪ್ ಈಶ್ವರ್

Prasthutha|

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕೆ. ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್‌ನಿಂದ ನಾನೇ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

- Advertisement -

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಕೆ. ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್‌ನಿಂದ ನನಗೆ ಟಿಕೆಟ್ ಕೊಡಲಿ. ಕಳೆದ ವಿಧಾನಸಭಾ ಚುನಾವಣೆಯ ಗೆಲುವಿನಂತೆ ಲೋಕಸಭೆ ಚುನಾವಣೆಯಲ್ಲೂ ಗೆದ್ದು ಬರುತ್ತೇನೆ ಎಂದು ಹೇಳಿದ್ದಾರೆ.

ಇದೇ ಸಮಯ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಕಿಡಿಗಾರಿದ ಪ್ರದೀಪ್ ಈಶ್ವರ್, ಅವನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್‌, ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು ಎಂದು ವಾರ್ನಿಂಗ್ ನೀಡಿದ್ದಾರೆ.

Join Whatsapp