Home ಕರಾವಳಿ ಹಿಜಾಬ್ ಗೆ ಅವಕಾಶ ನೀಡಿದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ತರಗತಿಗೆ ಬರುವುದು ನಿಶ್ಚಿತ:...

ಹಿಜಾಬ್ ಗೆ ಅವಕಾಶ ನೀಡಿದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ತರಗತಿಗೆ ಬರುವುದು ನಿಶ್ಚಿತ: ಹಿಂಜಾವೇ

ಮಂಗಳೂರು: ಸಮವಸ್ತ್ರದ ಜೊತೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಇಡೀ ಉಡುಪಿ ಜಿಲ್ಲೆಯಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗುವುದು ನಿಶ್ಚಿತ ಎಂದು ಹಿಂದೂ ಜಾಗರಣ ವೇದಿಕೆ ತಿಳಿಸಿದೆ.

ವೇದಿಕೆಯ ಮುಖಂಡ ಪ್ರಕಾಶ್ ಕುಕ್ಕೇಹಳ್ಳಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡ ಬರುವ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ನಾವು ಬಯಸುವುದಿಲ್ಲ. ಸಂವಿಧಾನದ ಆಶಯದಂತೆ ಶಾಲೆಗಳಲ್ಲಿ ಸಮವಸ್ತ್ರ ಇರಬೇಕು. ಈ ಆಶಯಕ್ಕೆ ಧಕ್ಕೆ ಬರಬಾರದು. ಮತೀಯ ಮೂಲಭೂತ ವ್ಯಕ್ತಿಗಳು, ಸಂಘಟನೆಗಳು ಶಾಲೆಯ ಶೈಕ್ಷಣಿಕ ವಾತಾವರಣವನ್ನು ಕೆಡಿಸಲು ಹಿಜಾಬ್ ವಿವಾದವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಅವರು ಆರೋಪಿಸಿದರು.

Join Whatsapp
Exit mobile version