ಮೃತ ವ್ಯಕ್ತಿಯ ಆಸ್ತಿ ಕಬಳಿಸಿದರೇ ಬಿಜೆಪಿ ಶಾಸಕ ಎಂ. ಚಂದ್ರಪ್ಪ?

Prasthutha|

ಚಿತ್ರದುರ್ಗ: ಹೊಳಲ್ಕರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಪತ್ನಿ ಮತ್ತು ಪುತ್ರರ ವಿರುದ್ಧ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಕಬಳಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ದೂರು ದಾಖಲಾಗಿದೆ.

- Advertisement -

ಜಿಪಿಎ ದುರುಪಯೋಗ ಮಾಡಿಸಿಕೊಂಡು ಶ್ರೀಧರ್ ಎಂಬುವರಿಗೆ ಸೇರಿದ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶ್ರೀಧರ್ ಮೃತರಾದ ಬಳಿಕ ಜಿಪಿಎ ದುರುಪಯೋಗ ಮಾಡಿಕೊಂಡು ಆಸ್ತಿ ಕಬಳಿಕೆ ಮಾಡಿದ್ದಾರೆ ಎಂದು ನಾಗರಾಜ್ ಮತ್ತು ಎಂ ಚಂದ್ರಪ್ಪ ಕುಟುಂಬದ ವಿರುದ್ಧ ಶ್ರೀಧರ್ ಸಹೋದರಿ ಲತಾ ಮತ್ತಿತರರು ಕೋರ್ಟ್ ಮೊರೆ ಹೋಗಿದ್ದರು.

ಅವರ ಮನವಿಯನ್ನು ಪುರಸ್ಕರಿಸಿದ ಕೋರ್ಟ್, ಪೊಲೀಸ್ ಠಾಣೆಗೆ ಸೂಚನೆ ನೀಡಿದ ಹಿನ್ನೆಲೆ ಎಪ್ರಿಲ್ 30 ರಂದು ಕಲಂ 404, 405, 415, 420, 423, 463, 464, 466, 468, 470, ರೆ/ವಿ 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp