ವಕ್ಫ್ ಬೋರ್ಡ್ ಕಾಯ್ದೆ ರದ್ದು ಮಾಡಿದರೆ ಕೋಟಿ-ಕೋಟಿ ಆಸ್ತಿ ಸರ್ಕಾರಕ್ಕೆ ಉಳಿತಾಯ: ಯತ್ನಾಳ್

Prasthutha|

ವಿಜಯಪುರ: ವಕ್ಫ್ ಬೋರ್ಡ್ ಕಾಯ್ದೆಯನ್ನು ರದ್ದು ಮಾಡಿದರೆ ಕೋಟ್ಯಂತರ ರೂಪಾಯಿ ಬಾಳುವ ಆಸ್ತಿ ಸರ್ಕಾರಕ್ಕೆ ಉಳಿತಾಯವಾಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಕಾಯ್ದೆ ಇರುವುದರಿಂದ ಅದನ್ನು ಯಾರೂ ಪ್ರಶ್ನೆ ಮಾಡದಂತಾಗಿದೆ. ದೇಶದ ಹಲವೆಡೆ ಬೆಲೆ ಬಾಳುವ ಸರ್ಕಾರಿ ಆಸ್ತಿ ವಕ್ಫ್ ಬೋರ್ಡ್ ಪಾಲಾಗಿದೆ. ಆದ್ದರಿಂದ ವಕ್ಫ್ ಕಾಯ್ದೆಯನ್ನೇ ರದ್ದು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಮುಂದಾಗಿದ್ದೇನೆ ಎಂದಿದ್ದಾರೆ.

ಇದೇ ವೇಳೆ `ಒನ್ ನೇಷನ್, ಒನ್ ಎಲೆಕ್ಷನ್’ಗೆ (ಒಂದು ದೇಶ-ಒಂದು ಚುನಾವಣೆ) ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಯತ್ನಾಳ್, ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ಆಗುವುದರಿಂದ ಸಾಕಷ್ಟು ಹಣ ಉಳಿತಾಯವಾಗುತ್ತೆ. ಅದೊಂದು ಮಹತ್ತರವಾದ ನಿರ್ಧಾರ ಎಂದು ಶ್ಲಾಘಿಸಿದ್ದಾರೆ.