ಜೈಪುರ: ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ಜಗಳ ಹೆಚ್ಚು. ಈ ತಲೆನೋವಿಗೆ ಪ್ರಾಂಶುಪಾಲರು ತಲೆನೋವಿನ ಮಾತ್ರೆಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ಡೋಟಾಸರಾ ಹೇಳಿದ್ದಾರೆ.
ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ಕೆಲವೊಮ್ಮೆ ರಜೆಗಾಗಿ ಜಗಳಗಳು ನಡೆಯುತ್ತವೆ, ಇತರ ದಿನಗಳಲ್ಲಿ ಬೇರೆ ವಿಷಯಗಳಿಗೆ ಜಗಳವಾಗುತ್ತವೆ ಎಂದು ಸಚಿವರು ಹೇಳಿದ್ದಾರೆ.
ಸಚಿವರ ಈ ಹೇಳಿಕೆಗೆ ಮಹಿಳಾ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.