ಚಿಕ್ಕಬಳ್ಳಾಪುರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣವನ್ನು ಸದ್ಯ ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ವಿಚಾರವಾಗಿ ನಗರದಲ್ಲಿ ಕರ್ಣಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ತನಿಖೆಯಲ್ಲಿ ಏನು ವರದಿ ಬರುತ್ತೆ ಅದು ಆಗೇ ಆಗುತ್ತೆ. ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು. ಅದಕ್ಕೆ ಯಾರೂ ಹೊರತಲ್ಲ. ತಪ್ಪಾಗಿದ್ದರೆ ಪೋಕ್ಸೋ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ತನಿಖಾ ವರದಿ ಬಂದ ಮೇಲೆ ಸತ್ಯ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.
2024 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 108 ಜನ ಮಹಿಳೆಯರು ಕಾಣೆಯಾಗಿದ್ದಾರೆ. 24 ಜನ ಮಹಿಳೆಯರು ಇನ್ನೂ ಪತ್ತೆಯೇ ಆಗಿಲ್ಲ. ಮಹಿಳೆಯರು ಕಾಣೆಯಾಗುವುದರ ಹಿಂದೆ ದೊಡ್ಡ ಮಾಫಿಯಾನೇ ಇದೆ. ಮಹಿಳೆಯರು ಪತ್ತೆಯಾಗದೇ ಇರುವುದನ್ನು ಕೇಳಿ ಅಧಿಕಾರಿಗಳ ಸಭೆಯಲ್ಲಿ ಡಾ.ನಾಗಲಕ್ಷ್ಮೀ ಆತಂಕ ವ್ಯಕ್ತಪಡಿಸಿದರು.