ಟಿಎಂಸಿ ನಾಯಕರನ್ನು ಬಂಧಿಸಿದರೆ ಬೀದಿಗಿಳಿಯಬೇಕು: ಮಮತಾ ಬ್ಯಾನರ್ಜಿ

Prasthutha|

ಬಿಜೆಪಿ ದೇಶವನ್ನೇ ಜೈಲಾಗಿ ಪರಿವರ್ತಿಸುತ್ತಿದೆ. ಟಿಎಂಸಿ ನಾಯಕರನ್ನು ಚುನಾವಣೆಗೆ ಮುನ್ನ ಬಂಧಿಸಿದ್ದೇ ಆದಲ್ಲಿ ಅವರ ಪತ್ನಿ, ಬೆಂಬಲಿಗರು ಬೀದಿಗಿಳಿಯಬೇಕು ಎಂದು ಪಶ್ಚಿಮ‌ ಬಂಗಾಳ ಸಿಎಂ ಕರೆ ನೀಡಿದ್ದಾರೆ.

- Advertisement -

ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾರ್ಯವೈಖರಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಎನ್‌ಐಎ ಅಧಿಕಾರಿಗಳು ಇತ್ತೀಚೆಗೆ ಪೂರ್ವ ಮೇದಿನಿಪುರ್ ಜಿಲ್ಲೆಯ ಭೂಪತಿನಗರಕ್ಕೆ ದಾಳಿಗೆ ತೆರಳಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

- Advertisement -

‘ಚುನಾವಣಾ ರ‍್ಯಾಲಿಗಳಲ್ಲಿ ಮಾತನಾಡಲು ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಅದಕ್ಕೆ ನನ್ನ ತಕರಾರು ಇಲ್ಲ. ಆದರೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಚುನಾವಣೆಯ ಬಳಿಕ ವಿರೋಧಪಕ್ಷಗಳ ನಾಯಕರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ ಎಂಬ ಅವರ ಹೇಳಿಕೆ ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ’ ಎಂದು ಮಮತಾ ಹೇಳಿದರು.

ಭಾನುವಾರ ಜಲ್‌ಪಾಯಿಗುಡಿಯಲ್ಲಿ ರ‍್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ನಾವು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಮಾತನಾಡುತ್ತೇವೆ. ಆದರೆ, ವಿರೋಧಪಕ್ಷಗಳು ಭ್ರಷ್ಟಾಚಾರಿಗಳನ್ನು ರಕ್ಷಿಸಿ ಎನ್ನುತ್ತಿವೆ. ಜೂನ್‌ 4ರ ನಂತರ ಈ ಭ್ರಷ್ಟಾಚಾರಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿಸಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಹೀಗೆ ಮಾತನಾಡಬಹುದೇ? ಚುನಾವಣೆ ಬಳಿಕ ಬಿಜೆಪಿ ನಾಯಕರನ್ನು ಜೈಲಿಗೆ ಹಾಕುತ್ತೇನೆ ಎಂದು ನಾನು ಹೇಳಿದರೆ ಹೇಗಿರುತ್ತದೆ.? ಪ್ರಜಾಪ್ರಭುತ್ವದಲ್ಲಿ ಇದು ಸ್ವೀಕಾರಾರ್ಹವಲ್ಲ. ನಾನು ಹಾಗೆ ಹೇಳುವುದಿಲ್ಲ ಎಂದರು.




Join Whatsapp