ಗುಜರಾತ್ ನಲ್ಲಿ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸ್ಟೇಡಿಯಂ ಹೆಸರು ಬದಲು: ಕಾಂಗ್ರೆಸ್

Prasthutha|

ಅಹಮದಾಬಾದ್: ಗುಜರಾತ್ ನಲ್ಲಿ ಅಧಿಕಾರಕ್ಕೆ ಬಂದರೆ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂಬುದಾಗಿ ಮರು ನಾಮಕರಣ ಮಾಡುವುದಾಗಿ ಕಾಂಗ್ರೆಸ್ ಹೇಳಿದೆ.

- Advertisement -


ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ಪಕ್ಷ ಗುಜರಾತ್ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರೆ ಸಂಪುಟದ ಮೊದಲ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆಯನ್ನು ಅಧಿಕೃತ ದಾಖಲೆಯನ್ನಾಗಿ ಮಾಡಲಾಗುವುದು. ಪ್ರಣಾಳಿಕೆಯಲ್ಲಿರುವ ಎಲ್ಲಾ ಅಂಶಗಳನ್ನು ಪೂರೈಸಲು ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.


ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಗೆ ಕಾಂಗ್ರೆಸ್ ಒತ್ತು ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ ನೀಡಲಾಗುವುದು ಎಂದು ಹೇಳಿದ್ದಾರೆ.

Join Whatsapp