ಮೈಸೂರು: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಹಿಡಿಯಬೇಕಾಗುತ್ತದೆ. ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದರು.
ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆಗಳು ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಮರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.