ನಾವು ಯಾರ ಜತೆ ಮೈತ್ರಿ ಮಾಡಿದರೆ ಇವರಿಗೇನು ಕಾಯಿಲೆ: ಕಾಂಗ್ರೆಸ್ ವಿರುದ್ಧ ರೇವಣ್ಣ ಕಿಡಿ

Prasthutha|

ಹಾಸನ: ಕೋಮುವಾದಿಗಳನ್ನು ದೂರ ಇಡಬೇಕು ಎನ್ನುವ ಕಾಂಗ್ರೆಸ್ ನವರು ಅವರ ಜತೆ ಸೇರಿಕೊಂಡು ತುಮಕೂರಿನಲ್ಲಿ ಹೆಚ್ ಡಿ ದೇವೇಗೌಡರನ್ನು ಸೋಲಿಸಿಲ್ಲವೇ? ನಾವು ಯಾರ ಜತೆ ಮೈತ್ರಿ ಮಾಡಿದರೆ ಇವರಿಗೇನು ಕಾಯಿಲೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೆಚ್ ಡಿ ದೇವೇಗೌಡರು, ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.

ಕೋಮುವಾದಿಗಳನ್ನು ದೂರ ಇಡಬೇಕು ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ತುಮಕೂರಿನಲ್ಲಿ ಅವರ ಜೊತೆ ಸೇರಿ ದೇವೇಗೌಡರನ್ನು ಸೋಲಿಸಿದ್ದರು. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಕೇಳಿರಲಿಲ್ಲ. ಹೆಚ್ಡಿ ದೇವೇಗೌಡರು ಮೈಸೂರು, ಮಂಡ್ಯ ಕ್ಷೇತ್ರಗಳನ್ನು ಕೇಳಿದ್ದರು. ಆದರೆ ದೇವೇಗೌಡರನ್ನು ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು. ದೇವೇಗೌಡರಿಗೆ ಶಕ್ತಿ ಇಲ್ಲವೆಂದು ಇಂಡಿಯಾ ಮೈತ್ರಿಕೂಟ ಸಭೆಗೆ ಕರೆದಿಲ್ಲ ಎಂದು ರೇವಣ್ಣ ವಾಗ್ದಾಳಿ ನಡೆಸಿದರು.

Join Whatsapp