ಅವಮಾನವಾಗುತ್ತಿದ್ದರೆ ಬಿಜೆಪಿ ಬಿಟ್ಟು ಬನ್ನಿ ಗೆಲುವು ಖಂಡಿತ ನಿಮ್ಮದೇ: ಗಡ್ಕರಿಗೆ ಆಫರ್ ಕೊಟ್ಟ ಉದ್ಧವ್

Prasthutha|

ಯವತ್ಮಾಲ್: ಅವಮಾನವಾಗುತ್ತಿದ್ದರೆ ಸಹಿಸಿಕೊಳ್ಳುವುದು ಬೇಡ ಬಿಜೆಪಿ ಬಿಟ್ಟು ಬನ್ನಿ ಖಂಡಿತವಾಗಿಯೂ ಚುನಾವಣೆಯಲ್ಲಿ ಗೆಲುವು ನಮ್ಮದೇ ಆಗಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಉದ್ಧವ್ ಠಾಕ್ರೆಗೆ ಆಫರ್ ನೀಡಿದ್ದಾರೆ.

- Advertisement -


ಲೋಕಸಭಾ ಚುನಾವಣೆಗೂ ಮುನ್ನ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಕಾವು ಮೂಡಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ವಿರೋಧ ಪಕ್ಷದ ನಾಯಕರು ಪದೇ ಪದೇ ಆಫರ್ಗಳನ್ನು ನೀಡುತ್ತಿದ್ದಾರೆ. ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದಲ್ಲಿ ಬಿಜೆಪಿಯಿಂದಲೇ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ನ ಮಾಜಿ ನಾಯಕ ಕೃಪಾಶಂಕರ್ ಸಿಂಗ್ ಅವರಂತವರ ಹೆಸರು ಪಕ್ಷ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾಣಿಸಿಕೊಂಡಿದೆ ಎಂದು ಟೀಕಿಸಿದರು.


ನಾನಿದನ್ನು ಎರಡು ದಿನಗಳ ಹಿಂದೆಯೇ ಗಡ್ಕರಿಗೆ ಹೇಳಿದ್ದೇನೆ. ಮತ್ತೆ ಅದನ್ನೇ ಪುನರಾವರ್ತಿಸುತ್ತಿದ್ದೇನೆ. ನಿಮಗೆ ಅಪಮಾನವಾಗುತ್ತಿದ್ದರೆ ಬಿಜೆಪಿಯನ್ನು ತೊರೆದು ಮಹಾ ವಿಕಾಸ ಅಘಾಡಿ ಜತೆ ಸೇರಿಕೊಳ್ಳಿ. ನಿಮ್ಮ ಗೆಲುವನ್ನು ನಾವು ಖಾತ್ರಿಪಡಿಸುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಚಿವರನ್ನಾಗಿ ಮಾಡುತ್ತೇವೆ ಎಂದು ಹೇಳಿದರು.



Join Whatsapp