ತಾಕತ್ತಿದ್ದರೆ ನನ್ನ ಹೆಸರೆತ್ತದೆ 5 ನಿಮಿಷ ಭಾಷಣ ಮಾಡಿ; ಬೊಮ್ಮಾಯಿಗೆ ಸಿದ್ದು ಟ್ವೀಟ್ ಗುದ್ದು

Prasthutha|

►ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು ಎಂದ ಮಾಜಿ ಸಿಎಂ

- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೂಡಿ ಜನಸಂಕಲ್ಪ ಯಾತ್ರೆ ನಡೆಸುತ್ತಿರುವ ಮುಖ್ಯಮಂತ್ರಿ ಬೊಮ್ಮಾಯಿಗೆ ಟ್ವೀಟ್ ಮೂಲಕ ಗುದ್ದು ಕೊಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ತಾಕತ್ತಿದ್ದರೆ ನನ್ನ ಹೆಸರೆತ್ತದೆ 5 ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಜನಸಂಕಲ್ಪ ಯಾತ್ರೆಗೆ ಒಂಟಿಯಾಗಿ ಹೋಗದೆ ಜೊತೆಗೆ ಯಡಿಯೂರಪ್ಪರನ್ನು ಸೇರಿಸುದರ ಬಗ್ಗೆ ಟ್ವೀಟ್ ಮಾಡಿರುವ ಸಿದ್ದು, ಬೊಮ್ಮಾಯಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಯಡಿಯೂರಪ್ಪರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

- Advertisement -

ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಯಡಿಯೂರಪ್ಪ ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಕಾಲೆಳೆದಿದ್ದಾರೆ.

ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಮುಖ್ಯಮಂತ್ರಿ ಅವರಿಗೆ ನನ್ನ ಎರಡೇ ಎರಡು ಸವಾಲು 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ರಾಹುಲ್ ಗಾಂಧಿಯನ್ನು ಟೀಕಿಸಿದ ಯಡಿಯೂರಪ್ಪಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಯಡಿಯೂರಪ್ಪ ಅವರೇ, ನಿಮ್ಮ ನರೆಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಹೇಳಿದ್ದಾರೆ.

ಟ್ವೀಟ್ ಸುರಿಮಳೆಗೈದಿರುವ ಸಿದ್ದರಾಮಯ್ಯ, ಬಡಾಯಿ ಬೊಮ್ಮಾಯಿ ಎಂದು ಹ್ಯಾಶ್ ಟ್ಯಾಗ್ ಬಳಸಿಕೊಂಡು ಎಲ್ಲಾ ಟ್ವೀಟ್ ಮಾಡಿದ್ದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ವ್ಯಂಗ್ಯ ಮಾಡಿದ್ದಾರೆ.

Join Whatsapp