ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಕಾವು ರಾಜ್ಯ ರಾಜಕೀಯದಲ್ಲಿ ಜೋರಾಗಿದೆ. ಸಿ ಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಸೇರ್ಪಡೆ ಹಿಂದೆ ಡಿ ಕೆ ಶಿವಕುಮಾರ್ ಸಿಡಿ ರಹಸ್ಯದ ಇದೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಕುರಿತು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಡಿ ಕೆ ಶಿವಕುಮಾರ್ ಸರ್.. ನನ್ನ ಸಿಡಿ ನಿಮ್ಮ ಬಳಿ ಇದ್ದರೆ ಯಾವುದೇ ಯೋಚನೆ ಮಾಡದೇ ರಿಲೀಸ್ ಮಾಡಿ ಎಂದು ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯಲ್ಲಿ ಸಿ ಡಿ ವಿಚಾರವಾಗಿ ಪ್ರಸ್ತಾಪವಾಗಿದ್ದು, ಪುತ್ರಿಯ ರಕ್ಷಣೆಗಾಗಿ ಸಿ ಪಿ ಯೋಗೇಶ್ವರ್ ಅವರು ಪಕ್ಷಾಂತರದ ನಿರ್ಧಾರ ತೆಗೆದುಕೊಂಡ್ರಾ ಎಂಬ ಬಗ್ಗೆ ಚರ್ಚೆಯಾಗಿದೆ. ಮಗಳ ಸಿಡಿ ಬಳಿಸಿಕೊಂಡು ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿ ಪಿ ಯೋಗೇಶ್ವರ್ ಅವರನ್ನ ಕರೆ ತಂದಿದ್ದಾರೆ ಎಂದು ಡಿ ಕೆ ಶಿವಕುಮಾರ್ ಮೇಲೆ ಆರೋಪ ಇದೆ ಎಂದು ನಿಶಾ ಯೋಗೇಶ್ವರ್ ಅವರು ಹೇಳಿದ್ದಾರೆ.
ಡಿ ಕೆ ಶಿವಕುಮಾರ್ ಸರ್ ನಿಮ್ಮ ಮೇಲೆ ಈ ರೀತಿಯಾದ ಆರೋಪ ಇದೆ. ನೀವು ನನ್ನ ಸಿಡಿ ಇಟ್ಟುಕೊಂಡು ನನ್ನ ತಂದೆಯನ್ನ ನಿಮ್ಮ ಪಕ್ಷಕ್ಕೆ ಎನ್ನುವ ಆರೋಪ ಇದೆ. ಡಿ ಕೆ ಶಿವಕುಮಾರ್ ಸರ್ ನೀವು ಯಾವುದಕ್ಕೂ ಹೆದರುವುದು ಬೇಡ, ನಿಮ್ಮ ಬಳಿ ಸಿಡಿ ಇದ್ರೆ ಹಿಂಜರಿಯದೇ ಸಿಡಿ ಬಿಡುಗಡೆ ಮಾಡಿ ಸರ್ ಎಂದು ನಿಶಾ ಯೋಗೇಶ್ವರ್ ಮನವಿ ಮಾಡಿದ್ದಾರೆ.
ನನ್ನ ಅಗ್ನಿ ಪರೀಕ್ಷೆ ನಡೆಯುತ್ತಿದೆ. ಆ ಸಿಡಿ ಇಲ್ಲ ಎನ್ನುವುದಾದ್ರೆ ಅದನ್ನು ಸಹ ಜನರಿಗೆ ಬಂದು ತಿಳಿಸಿ ಸರ್. ಇದು ದೊಡ್ಡ ಆರೋಪ ನಿಮ್ಮ ಮೇಲಿದೆ. ನೀವು ದೊಡ್ಡವರು ಸರ್, ನಿಮ್ಮಲ್ಲಿ ಸಿಡಿ ವಿಷಯ ಮಾಮೂಲಿ, ಆದರೆ ನೀವು ಹೆಣ್ಣು ಮಕ್ಕಳನ್ನು ಇಂತಹ ವಿಷಯನ್ನ ಎಳೆಯುತ್ತಿದೀರಾ ಎಂದು ನನಗೆ ಶಾಕ್ ಆಗುತ್ತಿದೆ.
ಡಿ ಕೆ ಶಿವಕುಮಾರ್ ಸರ್, ನೀವು ಒಬ್ರು ತಂದೆ. ನಿಮಗೂ ಹೆಣ್ಣು ಮಕ್ಕಳಿದ್ದಾರೆ. ಸರ್, ನಮ್ಮ ಪೀಳಿಗೆಗೆ ಸ್ಪಷ್ಟತೆ ಬೇಕು. ಆ ಸ್ಪಷ್ಟತೆಯನ್ನ ನೀವೇ ಕೊಡಿ ಸರ್. ನನ್ನ ಸಿಡಿ ನಿಜವಾಗಿಯೂ ನಿಮ್ಮ ಬಳಿ ಇದ್ರೆ, ಯಾವುದೇ ಯೋಚನೆ ಮಾಡದೇ ಬಿಡುಗಡೆ ಮಾಡಿ. ನಿಮ್ಮ ಉತ್ತರಕ್ಕೆ ನಾನು ಕಾಯುತ್ತಿರುತ್ತೇನೆ ಎಂದು ನಿಶಾ ಯೋಗೇಶ್ವರ್ ಹೇಳಿದ್ದಾರೆ.