ನಿಮಗೆ ಶಕ್ತಿ ಇದ್ರೆ 10 ಕೆ.ಜಿ ಅಕ್ಕಿ ಕೊಡಬೇಕು, ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ: ನಳಿನ್ ಕುಮಾರ್

Prasthutha|

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ಹಣ ಕೊಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ.

- Advertisement -


ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರವಾಗಿದೆ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣಾ ಪೂರ್ವದಲ್ಲಿ 10 ಕೆ.ಜಿ ಅಕ್ಕಿ ಅಂದಿದ್ರು. ನಮ್ಮದು ಸೇರಿ ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕಿತ್ತು. ಈವಾಗ ಅಕ್ಕಿಗೆ ಹಣ ಹಾಕೋಕೆ ಹೊರಟಿದ್ದಾರೆ ಎಮದು ಆಕ್ರೋಶ ಹೊರಹಾಕಿದ್ರು.


ಹಣ ಏನು ತಿನ್ನೋಕೆ ಆಗುತ್ತಾ ಅಂತಾ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ರು. ನಿಮಗೆ ಶಕ್ತಿ ಇದ್ರೆ 10 ಅಕ್ಕಿ ಕೊಡಬೇಕು. ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಬೇಕು. ಇಲ್ಲವಾದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.