ರಾಜ್ಯಾದ್ಯಂತ ದ್ವಿತೀಯ ಪಿಯಸಿ ಪರೀಕ್ಷೆ ಆರಂಭ

Prasthutha|

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭಗೊಂಡಿದೆ. 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

- Advertisement -

ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪಡೆದ ವರದಿ ಕಡ್ಡಾಯವಲ್ಲ. ಆದರೆ, ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಕಡ್ಡಾಯ ಎಂದು ‌ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗೆ ಕೋವಿಡ್‌ ಸೋಂಕು ದೃಢಪಟ್ಟರೆ ಪ್ರತ್ಯೇಕ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಆರಂಭಗೊಂಡಿರುವ ಪರೀಕ್ಷೆಯು ಮೇ 18ಕ್ಕೆ ಮುಕ್ತಾಯಗೊಳ್ಳಲಿದೆ.

Join Whatsapp