ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

Prasthutha|

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ.

- Advertisement -


ಪರೀಕ್ಷೆಗಾಗಿ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ಗಳನ್ನು ಬಿಡುಗಡೆ ಮಾಡಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1,109 ಕೇಂದ್ರಗಳಲ್ಲಿ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.



Join Whatsapp
Exit mobile version