12ರಿಂದ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Prasthutha|

ಮಂಗಳೂರು: ಇದೇ ಆ.12ರಿಂದ ಆ.25ರ ವರೆಗೆ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಯಲಿದೆ.

- Advertisement -

ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿಆರ್ಪಿ ಕಲಂ 144ರ ಪ್ರಕಾರ ಆ.12 ರಿಂದ 25 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ, ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದು ಅಥವಾ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದು ನಿಷೇಧಿಸಲಾಗಿದೆ.

- Advertisement -

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಅಥವಾ ಮಾಹಿತಿಯನ್ನು ರವಾನಿಸುವ,ತಿಳಿಸುವ ಅಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರೀಯೆಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ, ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸದಂತೆ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp