ಕಲಬುರಗಿ: ಮಸೀದಿಗಳಲ್ಲಿರುವ ಮೈಕ್ಗಳನ್ನು ತೆರವುಗೊಳಿಸುವಂತೆ ಪ್ರಮೋದ್ ಮುತಾಲಿಕ್ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಾ, ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ ಎಂದು ಗೂಂಡಾಗಿರಿ ಹೇಳಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ. ಇದು ನ್ಯಾಯಾಲಯ ಆದೇಶ ಉಲ್ಲಂಘನೆಯಾಗುತ್ತದೆ. ದಿನದ ಐದು ಬಾರಿ ಮಸೀದಗಳಲ್ಲಿನ ಪ್ರಾರ್ಥನೆ ಶಬ್ಧ ಕಿರಿಕಿರಿಯುಂಟಾಗುತ್ತಿದೆ ಎಂದು ಕೋಮು ಅಸಹನೆಯ ವಿಷಗಾರಿದ್ದಾರೆ.
ಮಸೀದಿಗಳ ಶಬ್ದಕ್ಕೆ ನಮ್ಮ ವಿರೋಧವಿದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ ಎಂದು ಮತಾಲಿಕ್ ಎಂದಿದ್ದಾರೆ.