ಉತ್ತರ ಪ್ರದೇಶ | ಬೈಕ್ ಜಾಥಾದಲ್ಲಿ ಬಂದೂಕು ಪ್ರದರ್ಶಿಸಿದ ಸಂಘಪರಿವಾರ ಕಾರ್ಯಕರ್ತರು: ವೀಡಿಯೋ ವೈರಲ್

Prasthutha|

ಉತ್ತರ ಪ್ರದೇಶ: ಸಂಘಪರಿವಾರ ಆಯೋಜಿಸಿದ್ದ ಬೈಕ್ ಜಾಥಾದಲ್ಲಿ ಬಂದೂಕು ಪ್ರದರ್ಶಿಸಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ವರದಿಯಾಗಿದೆ.

- Advertisement -

ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಘಪರಿವಾರದ ಕಾರ್ಯಕರ್ತರು ಬೈಕ್ ಗಳಲ್ಲಿ ಕೇಸರಿ ಧ್ವಜಗಳನ್ನು ಹಿಡಿದು ಮೆರವಣಿಗೆ ಸಾಗುತ್ತಿದ್ದು, ಈ ವೇಳೆ ಬಂದೂಕು ಪ್ರದರ್ಶಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಸಂಘಪರಿವಾರದ ಈ ನಡೆಗೆ ನೆಟ್ಟಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಕ್ರಮಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

- Advertisement -

ಘಟನೆಗೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp