ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ| ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ದ್ವಿಸದಸ್ಯ ಪೀಠ

Prasthutha|

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆ ಕೋರ್ಟ್ ನಿಗಾದಲ್ಲಿ ನಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಅಶೋಕ್ ಎಸ್.ಕಿಣಗಿರವರಿದ್ದ ದ್ವಿಸದಸ್ಯ ಪೀಠ, ಪ್ರಕರಣದ‌ ವಿಚಾರಣೆಯಿಂದ ಹಿಂದೆ ಸರಿದಿದೆ.

- Advertisement -

ಅಲ್ಲದೆ, ಬೇರೊಂದು ಪೀಠದ ಮುಂದೆ ವಿಚಾರಣೆ ನಿಗದಿಗೆ ಸೂಚನೆ ನೀಡಿದೆ. ಪ್ರಕರಣದ ತನಿಖೆ ಕೋರ್ಟ್ ನಿಗಾದಲ್ಲಿ ನಡೆಯಬೇಕು ಮತ್ತು ತನಿಖೆಯ ವಿವರ ಸಲ್ಲಿಕೆ ಕೋರಿ ಕಾಂಗ್ರೆಸ್​​ನ ಪ್ರಿಯಾಂಕ್ ಖರ್ಗೆ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬಂದು ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

Join Whatsapp