Home ಟಾಪ್ ಸುದ್ದಿಗಳು ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ| ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ದ್ವಿಸದಸ್ಯ ಪೀಠ

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ| ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ದ್ವಿಸದಸ್ಯ ಪೀಠ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆ ಕೋರ್ಟ್ ನಿಗಾದಲ್ಲಿ ನಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಅಶೋಕ್ ಎಸ್.ಕಿಣಗಿರವರಿದ್ದ ದ್ವಿಸದಸ್ಯ ಪೀಠ, ಪ್ರಕರಣದ‌ ವಿಚಾರಣೆಯಿಂದ ಹಿಂದೆ ಸರಿದಿದೆ.

ಅಲ್ಲದೆ, ಬೇರೊಂದು ಪೀಠದ ಮುಂದೆ ವಿಚಾರಣೆ ನಿಗದಿಗೆ ಸೂಚನೆ ನೀಡಿದೆ. ಪ್ರಕರಣದ ತನಿಖೆ ಕೋರ್ಟ್ ನಿಗಾದಲ್ಲಿ ನಡೆಯಬೇಕು ಮತ್ತು ತನಿಖೆಯ ವಿವರ ಸಲ್ಲಿಕೆ ಕೋರಿ ಕಾಂಗ್ರೆಸ್​​ನ ಪ್ರಿಯಾಂಕ್ ಖರ್ಗೆ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬಂದು ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

Join Whatsapp
Exit mobile version