ಅಕ್ರಮ ಡಿನೋಟಿಫಿಕೇಷನ್: ಬಿಎಸ್ ವೈ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ವಿರುದ್ದ , ದಾಖಲಾಗಿದ್ದ ಎಫ್ ಐ ಆರ್ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಯಡೀಯೂರಪ್ಪ ಮತ್ತೆ ಸಂಕಷ್ಟ ಎದುರಾಗಿದೆ.

- Advertisement -

ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ, ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು,

ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಗೆ ಯಡಿಯೂರಪ್ಪಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಈ ಬಗ್ಗೆ ನಾವು ವಿಚಾರಣೆ ನಡೆಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ. ವಿಚಾರಣೆಗೆ ಸುಪ್ರೀಂಕೋರ್ಟ್ ನ ಸಿಜೆಐ ಯು.ಯು ಲಲಿತ್ ನಿರಾಕರಿಸಿದ್ದಾರೆ, ದೀಪಾವಳಿ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.



Join Whatsapp