ಭಾರತಕ್ಕೆ ಅಕ್ರಮ ಪ್ರವೇಶ: 14 ಬಾಂಗ್ಲಾ ಪ್ರಜೆಗಳ ಬಂಧನ

Prasthutha|

ತ್ರಿಪುರಾ: ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಆರೋಪದಲ್ಲಿ 14 ಬಾಂಗ್ಲಾದೇಶಿಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ನಾಲ್ವರು ಮಕ್ಕಳು ಸೇರಿದ್ದು, ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಸಬ್ರೂಮ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಅಪು ದಾಸ್ ತಿಳಿಸಿದ್ದಾರೆ. ತಿಳಿಸಿದ್ದಾರೆ.

- Advertisement -

ಖಚಿತ ಮಾಹಿತಿ ಆಧಾರದ ಮೇಲೆ ಮೇರೆಗೆ ಅಂತಾರಾಷ್ಟ್ರೀಯ ಗಡಿ ಸಮೀಪದ ಬೈಷ್ನಾಬ್ಪುರ ಗ್ರಾಮದ ಎರಡು ಮನೆಗಳ ಮೇಲೆ ದಾಳಿ ನಡೆಸಿ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ಅಪು ದಾಸ್ ಹೇಳಿದ್ದಾರೆ‌. ಬಾಂಗ್ಲಾದೇಶಿ ಪ್ರಜೆಗಳಿಗೆ ಆಶ್ರಯ ನೀಡಿದ ಮೂವರು ಸ್ಥಳೀಯರನ್ನು ಸಹ ಬಂಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಬ್ರೂಮ್ ಉಪವಿಭಾಗದ 62 ಕಿಮೀ ಗಡಿಯನ್ನು ಭೌಗೋಳಿಕ ಸಮಸ್ಯೆಗಳಿಂದ ಸಂಪೂರ್ಣವಾಗಿ ಮುಚ್ಚಲು ಸಾಧ್ಯವಾಗಲಿಲ್ಲ ಎಂದು ಅಪು ದಾಸ್ ಹೇಳಿದ್ದಾರೆ‌



Join Whatsapp