ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆಯಿಂದ ಅಕ್ರಮ ಚಿನ್ನ ವಶ

Prasthutha|

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಂದ 739 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

- Advertisement -

ದುಬೈಯಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚಿನ್ನದ ಪೇಸ್ಟ್ ಅನ್ನು ಬೂದು ಬಣ್ಣದ ಪೇಪರ್ ನಲ್ಲಿಟ್ಟು ಒಳ ಉಡುಪಿನಲ್ಲಿ ಇರಿಸಿ ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp