Home ಕರಾವಳಿ ಮಂಗಳೂರು ವಿಮಾನ ನಿಲ್ದಾಣದಲ್ಲಿ 17 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 17 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 17 ಲಕ್ಷ ರೂ. ಮೌಲ್ಯದ ಚಿನ್ನವನ್ನು ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಕೇರಳದ ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.


ದುಬೈನಿಂದ ಹೊರಟ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಮಂಗಳವಾರ ನಸುಕಿನಜಾವ 2 ಗಂಟೆ ಸುಮಾರಿಗೆ ಮಂಗಳೂರು ನಿಲ್ದಾಣ ತಲುಪಿದೆ. ತಪಾಸಣೆ ವೇಳೆ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ದ್ರವರೂಪದಲ್ಲಿ ಪತ್ತೆಯಾಗಿದೆ. ಇದನ್ನು ಗಮ್ ನೊಂದಿಗೆ ಮಿಶ್ರಣ ಮಾಡಿ, ಕಂದು ಬಣ್ಣದ ಶೀಟ್ ವೊಂದರಲ್ಲಿ ಪ್ರಯಾಣಿಕ ಅಡಗಿಸಿಟ್ಟಿದ್ದ. ಇದನ್ನು ಟ್ರಾಲಿಯ ಕೆಳಭಾಗದ ಎರಡು ಪದರುಗಳ ಆಳದಲ್ಲಿ ಇರಿಸಿ, ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಎಂದು ತಿಳಿದುಬಂದಿದೆ.
ತಪಾಸಣೆ ವೇಳೆ ಈ ಪ್ರಯಾಣಿಕ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Join Whatsapp
Exit mobile version