ಲಕ್ನೋ: ಅಯೋಧ್ಯೆಯಲ್ಲಿ ಬಿಜೆಪಿ ನಾಯಕರೇ ಅಕ್ರಮ ಭೂ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದ್ದು, ಮೇಯರ್ ಮತ್ತು ಬಿಜೆಪಿ ಶಾಸಕ ಸೇರಿದಂತೆ 40 ಮಂದಿ ಇದರಲ್ಲಿ ಭಾಗಿಯಾಗಿದ್ದಾರೆ.
ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಇವರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ ಮತ್ತು ಕಾಲೋನಿಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ.
ಮೇಯರ್ ರಿಷಿಕೇಶ್ ಉಪಾಧ್ಯಾಯ, ಶಾಸಕ ವೇದಪ್ರಕಾಶ್ ಗುಪ್ತಾ ಹಾಗೂ ಮಾಜಿ ಶಾಸಕ ಗೋರಖ್ ನಾಥ್ ಬಾಬಾ ಸೇರಿದಂತೆ 40 ಮಂದಿಯ ಹೆಸರನ್ನು ಪ್ರಾಧಿಕಾರ ಬಿಡುಗಡೆ ಮಾಡಿದೆ.
ಸ್ಥಳೀಯ ಸಂಸದ ಲಲ್ಲು ಸಿಂಗ್ ಅವರು ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರಬರೆದು ತನಿಖೆಗೆ ಒತ್ತಾಯಿಸಿದ್ದಾರೆ. ಸಮಾಜವಾದಿ ಪಕ್ಷ ಕೂಡ ಈ ಅಕ್ರಮದ ವಿರುದ್ಧ ಧ್ವನಿ ಎತ್ತಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದೆ.