ನವದೆಹಲಿ: ಭಾರತೀಯ ಸೇನೆಯ ಭೂಮಿಯನ್ನು ಆಕ್ರಮಿಸಿಕೊಂಡಿರುವವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಶುಕ್ರವಾರ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ನ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಸುಮಾರು ನಾಲ್ಕು ಮತ್ತು ಜಾರ್ಖಂಡ್ ನ ಎಂಟು ಸ್ಥಳಗಳಲ್ಲಿ ದಾಳಿಗಳು ನಡೆದಿವೆ. ಕೋಲ್ಕತಾ ಮೂಲದ ಉದ್ಯಮಿ ಅಮಿತ್ ಅಗರ್ವಾಲ್ ಮತ್ತು ಇತರರ ವಸತಿ ಮತ್ತು ಕಚೇರಿ ಆವರಣಗಳನ್ನು ಶೋಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಳೆದ ತಿಂಗಳು ಅಮಿತ್ ಅಗರವಾಲ್ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಆತನ ಕೃತ್ಯಗಳು ಬೆಳಕಿಗೆ ಬಂದ ನಂತರ ಈ ದಾಳಿಗಳನ್ನು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.