ರೈಲಿನಲ್ಲಿ ಅಕ್ರಮ ಮದ್ಯ ಸಾಗಾಟಕ್ಕೆ ಯತ್ನಿಸುತಿದ್ದ ಗುಂಪೊಂದರ ಯತ್ನವನ್ನು ಮಂಗಳೂರು ರೈಲ್ವೇ ಪೊಲೀಸರು ವಿಫಲಗೊಳಿಸಿದ್ದು, 138.750 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ ಮತ್ತು ರೈಲ್ವೇ ಪೊಲೀಸರು ಕಂಟಿಯಾಗಿ ಈ ಕಾರ್ಯಾಚರಣೆ ಕೈಗೊಂಡಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ನಾಪತ್ತೆಯಾಗಿದ್ದಾರೆ.
ದಾದರ್ – ತಿರುನಲ್ವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಮದ್ಯವನ್ನು ಸಾಗಾಟ ಮಾಡಲಾಗುತ್ತಿತ್ತು. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತೆ ಶೈಲಜಾ ಕೋಟೆ, ದಕ್ಷಿಣ ರೈಲ್ವೇ ಮಂಗಳೂರು ನಿರೀಕ್ಷಕ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.