ಮಂಗಳೂರು: PSI ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆಪಾದನೆ ಕುರಿತು ತನಿಖೆ ನಡೆಸುತ್ತಿರುವ ರಾಜ್ಯ ಸಿಐಡಿ ಪೊಲೀಸರು, ಇಂದು ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಶಾಸಕ ರೊಬ್ಬರ ಗನ್ ಮ್ಯಾನ್ ಒಬ್ಬರನ್ನು ಬಂಧಿಸಿದ್ದಾರೆ.
ಸಿಐಡಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮ ದಲ್ಲಿ ಭಾಗವಹಿಸಿದ್ದ ಎಲ್ಲಾ ತಪ್ಪಿತಸ್ಥರನ್ನು ಬಂಧಿಸಿ ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು ಅಕ್ರಮದಲ್ಲಿ ಒಳಗಾಗಿದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದು ಅವರು ತಿಳಿಸಿದ್ದಾರೆ.