Home ಟಾಪ್ ಸುದ್ದಿಗಳು ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಬಳ್ಳಾರಿ: ಕೋವಿಡ್‌ನ‌ಲ್ಲಿ ಯಾವುದೇ ಹಗರಣ ನಡೆದಿಲ್ಲ. ಕಾನೂನು ಚೌಕಟ್ಟಿನಲ್ಲೇ ನಾವು ಕೆಲಸ ಮಾಡಿದ್ದೇವೆ. ಹೀಗಾಗಿ ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್‌ ಅಕ್ರಮ ಕುರಿತು ಪ್ರಸ್ತಾವಿಸಲಾಗುತ್ತಿದೆ. ದುರುದ್ದೇಶದಿಂದ ನನ್ನ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗದು ಎಂದು ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಪ ಮಾಡುವುದು ಬಿಟ್ಟು ಬೇರೇನೂ ಗೊತ್ತಿಲ್ಲ. ಉದ್ದೇಶಪೂರ್ವಕವಾಗಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದ ಯಡಿಯೂರಪ್ಪ, ಸಿಎಂ ಅವರು ಮೂರು ದಿನಗಳಿಂದ ಸಂಡೂರು ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದಾರೆ ಎಂದರೆ ಅವರಿಗೆ ಸೋಲಿನ ಕಹಿ ಅನುಭವವಾಗುತ್ತಿದೆ ಎಂದರ್ಥ. ಸಿಎಂ ಮತ್ತು ಅವರ ಸಂಪುಟದ ಸಚಿವರು ಕೂಡ ಪ್ರಚಾರ ಮಾಡುತ್ತಿದ್ದು, ಅದು ಯಾವುದೂ ಪ್ರಯೋಜನವಾಗುವುದಿಲ್ಲ. ಬಿಜೆಪಿಯ ಗೆಲುವು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Join Whatsapp
Exit mobile version