ಧೂಳಖೇಡ ಚೆಕ್’ಪೋಸ್ಟ್’ನಲ್ಲಿ ತಪಾಸಣೆ ವೇಳೆ 47.38 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ

Prasthutha|

ವಿಜಯಪುರ: ಚಡಚಣ ತಾಲೂಕಿನ ಧೂಳಖೇಡ ಚೆಕ್ ಪೋಸ್ಟ್ನಲ್ಲಿ ನಿನ್ನೆ ಮಧ್ಯರಾತ್ರಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿ ತಡೆದ ಅಬಕಾರಿ ಅಧಿಕಾರಿಗಳು ಚಾಲಕನನ್ನು ಬಂಧಿಸಿ ಮದ್ಯ ಜಪ್ತಿ ಮಾಡಿದ್ದಾರೆ.

- Advertisement -


ತುಮಕೂರಿನ ಫೈರೋಜ್, ಸೈಯದ್ ಅಬ್ದುಲ್ ರಹಮಾನ್ ಬಂಧಿತ ಆರೋಪಿಗಳು.
ಚೆಕ್’ಪೋಸ್ಟ್’ನಲ್ಲಿ ತಪಾಸಣೆ ನಡೆಸುತ್ತಿದ್ದಾಗ 47.38 ಲಕ್ಷ ರೂ ಮೌಲ್ಯದ 9,108 ಲೀಟರ್ ಬಿಯರ್ ಹಾಗೂ 10 ಲಕ್ಷ ಮೌಲ್ಯದ ಲಾರಿ ಸೇರಿ 57,38,851 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಂಡಿ ವಲಯ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸೀರೆ ವಶಕ್ಕೆ:
ಅಕ್ರಮವಾಗಿ ಸೀರೆ, ಇತರೆ ಬಟ್ಟೆ ಸಂಗ್ರಹಿಸಿಟ್ಟಿದ್ದ ಕಾಂಪ್ಲೆಕ್ಸ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಮುದ್ದೇಬಿಹಾಳ ಪಟ್ಟಣದ ಹಳೇ ತಹಶೀಲ್ದಾರ ಕಚೇರಿಯ ಬಳಿ ನಡೆದಿದೆ. ಮೋಹನ ಹಂಚಾಟೆ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಅಕ್ರಮ ಮದ್ಯ ಜಪ್ತಿ:
ಇಂಡಿ ತಾಲ್ಲೂಕಿನ ಹಡಲಸಂಗ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಅಣ್ಣಾರಾಯ್ ಶ್ರೀಶೈಲ್ ಪೂಜಾರಿ ಬಂಧಿತ. ಈತನಿಂದ 14 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಇಂಡಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗದು ವಶಕ್ಕೆ:
ದಾಖಲೆ ಇಲ್ಲದೇ ಸಾಗಿಸುತ್ತಿದ್ದ 54 ಲಕ್ಷ ರೂ. ಹಣವನ್ನು ಝಳಕಿ ಚೆಕ್ ಪೋಸ್ಟ್’ನಲ್ಲಿ ಭಾನುವಾರ ಮಧ್ಯರಾತ್ರಿ ವಶಕ್ಕೆ ಪಡೆಯಲಾಗಿದೆ. ಕಾರು ತಡೆದು ಪರಿಶೀಲನೆ ನಡೆಸಿದಾಗ ಒಟ್ಟು 54,49,000 ರೂ. ಸಾಗಣೆ ಕಂಡು ಬಂದಿದ್ದು, ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಣ ಸಾಗಣೆ ಬಗ್ಗೆ ಝಳಕಿ ಚೆಕ್ಪೋಸ್ಟ್ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಅಲರ್ಟ್ ಆದ ಪೊಲೀಸರು ವಾಹನ ತಪಾಸಣೆ ನಡೆಸಿ ನಗದು ಹಣ ವಶಪಡಿಸಿಕೊಂಡಿದ್ದಾರೆ.


ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ವಿಚಾರಣೆ ನಡೆಸಿದಾಗ ಬೆಂಗಳೂರಿನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಹಣ ಯಾವ ಉದ್ದೇಶಕ್ಕೆ ತೆಗೆದುಕೊಂಡು ಹೋಗುತ್ತಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಚಡಚಣ ಸಿಪಿಐ ಮಾಹಿತಿ ನೀಡಿದ್ದಾರೆ.



Join Whatsapp