Home ಟಾಪ್ ಸುದ್ದಿಗಳು ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಮೃತ್ಯು: ತೀವ್ರ ಸಂತಾಪ ವ್ಯಕ್ತಪಡಿಸಿದ ಇಲ್ಯಾಸ್ ತುಂಬೆ

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಮೃತ್ಯು: ತೀವ್ರ ಸಂತಾಪ ವ್ಯಕ್ತಪಡಿಸಿದ ಇಲ್ಯಾಸ್ ತುಂಬೆ

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರ ಅಕಾಲಿಕ ನಿಧನಕ್ಕೆ ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ತೀವ್ರ ಸಂತಾಪ ಸೂಚಿಸಿದ್ದಾರೆ.


ಇರಾನ್ ಅಧ್ಯಕ್ಷರ ಹುತಾತ್ಮತೆಗೆ ತೀವ್ರ ಸಂತಾಪ ಎಂದು ಇಲ್ಯಾಸ್ ಮುಹಮ್ಮದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.


ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರು ಇರಾನ್ನ ತಬ್ರೀಝ್ ನಗರದಲ್ಲಿ ಆಝರ್ಬೈಜಾನ್ ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ.


ಹೆಲಿಕಾಪ್ಟರ್ ಪತನಗೊಂಡ ಸ್ಥಳದ ವೀಡಿಯೋ ಫುಟೇಜ್ ಕೂಡ ಲಭ್ಯವಾಗಿದೆ. ಹೆಲಿಕಾಫ್ಟರ್ ನಲ್ಲಿ ಅಧ್ಯಕ್ಷ ರಯೀಸಿ, ವಿದೇಶ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿ ಮತ್ತು ಇತರ ಅಧಿಕಾರಿಗಳಿದ್ದರು. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್ ಸಂಪರ್ಕ ಕಳೆದುಕೊಂಡಿತ್ತು.

Join Whatsapp
Exit mobile version