ರಾಷ್ಟ್ರಪತಿ ಚುನಾವಣೆಯ ರೇಸ್’ನಲ್ಲಿ ನಾನಿಲ್ಲ ಎಂದ ಶರದ್ ಪವಾರ್ !

Prasthutha|

ಮುಂಬೈ: ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಎನ್ ಸಿಪಿ ಮುಖಂಡ ಶರದ್ ಪವಾರ್ ಹೆಸರು ಸ್ಪರ್ಧಿಸಲಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು, ಆದರೆ ಈ ವದಂತಿಗೆ ಸ್ವತಃ ತೆರೆ ಎಳೆದಿರುವ ಪವಾರ್, ರಾಷ್ಟ್ರಪತಿ ಚುನಾವಣೆಯ ರೇಸ್’ನಲ್ಲಿ ನಾನಿಲ್ಲ ಎಂದು ಹೇಳಿದ್ದಾರೆ.

- Advertisement -

ರಾಷ್ಟ್ರಪತಿ ಹುದ್ದೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಬೆಂಬಲವನ್ನು ಶರದ್ ಪವಾರ್’ಗೆ ನೀಡಿದೆ ಎಂದು ವರದಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರಣಿ ಸಭೆಗಳನ್ನು ನಡೆಸುತ್ತಿದ್ದು, ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ವಿರೋಧ ಪಕ್ಷಗಳು ಒಟ್ಟಾಗಿ ಚರ್ಚೆ ನಡೆಸುತ್ತಿದೆ ಎನ್ನಲಾಗಿತ್ತು, ಒಮ್ಮತದಿಂದ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಇಳಿಸಲು ವಿರೋಧ ಪಕ್ಷಗಳು ಸಜ್ಜಾಗಿತ್ತು, ಆದರೆ ಇದೀಗ ಈ ಚುನಾವಣಾ ರೇಸ್’ನಲ್ಲಿ ನಾನಿಲ್ಲ ಎಂದು ಪವಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ ಎಂದು ಪವಾರ್ ಮುಂಬೈನಲ್ಲಿ ನಡೆದ ಎನ್‌ಸಿಪಿ ಸಭೆಯಲ್ಲಿ ಹೇಳಿರುವುದಾಗಿ ವರದಿಯಾಗಿದೆ.

- Advertisement -

ದೇಶದ 16ನೇ ರಾಷ್ಟ್ರಪತಿಗಾಗಿ ಜುಲೈ 18ರಂದು ಚುನಾವಣೆ ನಡೆಯಲಿದ್ದು, ಜೂನ್ 15ರಿದ ಅಧಿಸೂಚನೆ ಪ್ರಕಟಗೊಳ್ಳಲಿದೆ. ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ನಿಗದಿಯಾಗಿದ್ದು, ಜುಲೈ 2ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ.



Join Whatsapp