Home ಟಾಪ್ ಸುದ್ದಿಗಳು ರಾಜ್ಯಾದ್ಯಂತ ಮೂರು ದಿನಗಳ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯಾದ್ಯಂತ ಮೂರು ದಿನಗಳ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

►►ದಕ್ಷಿಣ ಕ್ನನಡ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದ್ದು. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join Whatsapp
Exit mobile version