Home ಕರಾವಳಿ ಮಂಗಳೂರು | ಕರಾವಳಿಯಲ್ಲಿ ಹೈ ವೇವ್ ಅಲರ್ಟ್: ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ...

ಮಂಗಳೂರು | ಕರಾವಳಿಯಲ್ಲಿ ಹೈ ವೇವ್ ಅಲರ್ಟ್: ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಲೆ ಏಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ಕಾರಣಕ್ಕೂ ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದ್ದು, ಸಮುದ್ರದ ಹತ್ತಿರ ಓಡಾಡುವುದು, ಆಟವಾಡುವುದು ಕೂಡಾ ನಿಷೇಧಿಸಿ ದಕ್ಷಿಣಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರಡಿಸಿದೆ.


ಪಶ್ಚಿಮ ಕರಾವಳಿಯಲ್ಲಿ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಜೂನ್ 19 ರ ವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Join Whatsapp
Exit mobile version