ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ, ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ: ಸಿದ್ದರಾಮಯ್ಯ

Prasthutha|

‘ಕುವೆಂಪು ಅವರು ಹೇಳಿದಂತೆ “ಸರ್ವ ಜನಾಂಗದ ಶಾಂತಿಯ ತೋಟ” ಆಗಬೇಕು’

- Advertisement -

ಬೆಂಗಳೂರು : ನಮ್ಮ ಸರ್ಕಾರ “ಸರ್ವರಿಗೂ ಸಮಪಾಲು” ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ , 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ.
ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ನಿವೇದಿಸಿಕೊಂಡರು.

- Advertisement -


ಮತ್ತೆ ಸಿದ್ದರಾಮಯ್ಯ ಅವರೇ ಬರಬೇಕಾಯಿತು :
ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್, “ಹಜ್ ಭವನದ ನವೀಕರಣಕ್ಕೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರದ ಕೊನೆ ದಿನಗಳಲ್ಲಿ 5 ಕೋಟಿ ಘೋಷಿಸಿದರು. ಆದರೆ ನಂತರ ಬಂದ ಸರ್ಕಾರಗಳು ಈ ಹಣ ಕೊಡಲಿಲ್ಲ. ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಗೆದ್ದು ಬಂದು ಆ ಹಣ ನೀಡಿದ್ದಾರೆ. ಇದೇ ರೀತಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸಮುದಾಯದ ಪ್ರಗತಿಗೆ 5 ಸಾವಿರ ಕೋಟಿ ಅನುದಾನವನ್ನು ತಮ್ಮ ಅವಧಿಯಲ್ಲಿ ನೀಡಬೇಕು. ಸಮಾಜದ ಹಿರಿಯರು ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ನುಡಿದಂತೆ ನಡೆಯುವ ಸಿದ್ದರಾಮಯ್ಯ ಅವರು ಈ ಭರವಸೆಯನ್ನೂ ಈಡೇರಿಸುತ್ತಾರೆ ಎಂದರು.



Join Whatsapp