ಮಾಂಡೂಸ್‌ ಚಂಡಮಾರುತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮಾಂಡೂಸ್‌ ಚಂಡಮಾರುತ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿ.10ರಿಂದ ಮೂರು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆ ಸುರಿಯಲಿದ್ದು ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕೋಲಾರ, ಮೈಸೂರು, ತುಮಕೂರು, ಬಾಗಲಕೋಟೆ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

- Advertisement -

ಬೆಂಗಳೂರು, ಹಾಸನ, ಕೊಡಗಿನ ಅಲ್ಲಲ್ಲಿ ಶುಕ್ರವಾರ ತುಂತುರು ಮಳೆ ಸುರಿದಿದೆ. ಮೈಕೊರೆಯುವ ಚಳಿಯಿತ್ತು.

Join Whatsapp