Home ಟಾಪ್ ಸುದ್ದಿಗಳು ಮಾಂಡೂಸ್‌ ಚಂಡಮಾರುತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಮಾಂಡೂಸ್‌ ಚಂಡಮಾರುತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮಾಂಡೂಸ್‌ ಚಂಡಮಾರುತ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿ.10ರಿಂದ ಮೂರು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆ ಸುರಿಯಲಿದ್ದು ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕೋಲಾರ, ಮೈಸೂರು, ತುಮಕೂರು, ಬಾಗಲಕೋಟೆ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಬೆಂಗಳೂರು, ಹಾಸನ, ಕೊಡಗಿನ ಅಲ್ಲಲ್ಲಿ ಶುಕ್ರವಾರ ತುಂತುರು ಮಳೆ ಸುರಿದಿದೆ. ಮೈಕೊರೆಯುವ ಚಳಿಯಿತ್ತು.

Join Whatsapp
Exit mobile version