Home ಟಾಪ್ ಸುದ್ದಿಗಳು ಕೊರೋನಾ ಸ್ಫೋಟ: ಇಂದು ಸಂಜೆ 4 ಗಂಟೆಗೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಕೊರೋನಾ ಸ್ಫೋಟ: ಇಂದು ಸಂಜೆ 4 ಗಂಟೆಗೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಇಂದು  ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಸಭೆ ಕರೆದಿದ್ದಾರೆ.

ಕೋವಿಡ್ ಕುರಿತು ವರ್ಚುವಲ್ ಮೂಲಕ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಹಿರಿಯ ಸಚಿವರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ, ಸಿನಿಮಾ ಮಂದಿರ, ರೆಸ್ಟೋರೆಂಟ್ ಸೇರಿ ಎಲ್ಲಾ ಕಡೆ ಶೇ. 50ರ ನಿಯಮ ಜಾರಿ, ಮದುವೆ ಸಮಾರಂಭಗಳಿಗೆ ಜನರ ಮಿತಿ ಹೇರಲಾಗಿದೆ. ಆದರೂ ಕೋವಿಡ್ ಸೋಂಕು ಪ್ರಕರಣಗಳು ಮಾತ್ರ ಏರುತ್ತಲೇ ಇದೆ. ಸದ್ಯ ನಿತ್ಯ 30 ಸಾವಿರ ಸಂಖ್ಯೆಯನ್ನು ದಾಟಿದ್ದು, ಆತಂಕ ಮೂಡಿಸಿದೆ.

Join Whatsapp
Exit mobile version