ಇಂದು ಎನ್‌ಡಿಎ ಸಂಸದೀಯ ಪಕ್ಷದ ಮಹತ್ವದ ಸಭೆ: ಪ್ರಧಾನಿ ಭಾಗಿ

Prasthutha|

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಇದರ ಸಂಸದೀಯ ಪಕ್ಷದ ಸಭೆ ಇಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಮೂರನೇ ಅವಧಿಗೆ ಅಧಿಕಾರ ಬಳಿಕ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷಗಳ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿಯ ಮೊದಲ ಭಾಷಣ ಇದಾಗಿದೆ.

ಇಂದು ನಡೆಯಲಿರುವ ಸಭೆಯ ಬಗ್ಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲಾ ಸಂಸತ್ ಸದಸ್ಯರಿಗೆ ಸೂಚನೆ ನೀಡಲಾಗಿದೆ ಮತ್ತು ಹಾಜರಾಗುವಂತೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷಗಳು 53 ಸ್ಥಾನಗಳನ್ನು ಗೆದ್ದಿವೆ. ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯದ ಕಾರಣ ಸರ್ಕಾರ ರಚನೆಗೆ ತನ್ನ ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ.

Join Whatsapp