2024ರ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಇಮ್ರಾನ್ ಖಾನ್

Prasthutha|

ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ 2024ರ ರಾಷ್ಟ್ರೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ತವರು ಮಿಯಾನ್ವಾಲಿಯಲ್ಲಿ ರಾಷ್ಟ್ರೀಯ ಅಸೆಂಬ್ಲಿ ಸ್ಥಾನದಿಂದ ಸ್ಪರ್ಧಿಸಲು ಇಮ್ರಾನ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

- Advertisement -

ರಾಜ್ಯ ರಹಸ್ಯಗಳ ಸೋರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ಅವರಿಗೆ ಜಾಮೀನು ದೊರೆತಿದೆ. ಆದ್ರೆ, ಭ್ರಷ್ಟಾಚಾರದ ಆರೋಪದಲ್ಲಿ ಮೂರು ವರ್ಷಗಳ ಶಿಕ್ಷೆಯನ್ನ ಅನುಭವಿಸುತ್ತಿರುವಾಗ ಅವರನ್ನ ಹೇಗೆ ಬಿಡುಗಡೆ ಮಾಡಲಾಯಿತು ಅನ್ನೋದು ಅಸ್ಪಷ್ಟವಾಗಿದೆ.

ಇಮ್ರಾನ್ ಖಾನ್ ಏಪ್ರಿಲ್ 2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತರಾದಾಗಿದ್ದು, ಅನೇಕ ರಾಜಕೀಯ ಮತ್ತು ಕಾನೂನು ಹೋರಾಟಗಳಲ್ಲಿ ಸಿಲುಕಿದ್ದಾರೆ. ವಿದೇಶಿ ಶಕ್ತಿಗೆ ಲಾಭವಾಗುವ ಉದ್ದೇಶದಿಂದ ಇಮ್ರಾನ್ ಖಾನ್ ರಾಜ್ಯ ರಹಸ್ಯಗಳನ್ನು ಸೋರಿಕೆ ಮಾಡಿದ್ದಾರೆ ಎಂಬ ಅದರಲ್ಲಿ ಒಂದು. ಈ ಆರೋಪದಲ್ಲಿ ಸಾಕಷ್ಟು ಪುರಾವೆಗಳು ಕಂಡುಬಂದಿಲ್ಲ ಎಂದು ನ್ಯಾಯಾಲಯ ಇಮ್ರಾನ್ ಖಾನ್‌ಗೆ ಜಾಮೀನು ನೀಡಿದೆ. ಇದರ ಬೆನ್ನಿಗೆ ಅವರು ಲೋಪಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಇಮ್ರಾನ್ ಖಾನ್ ವಿರುದ್ಧ ರಾಜ್ಯ ರಹಸ್ಯಗಳ ಸೋರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ಇಮ್ರಾನ್ ಖಾನ್ ಅವರಿಗೆ ಜಾಮೀನು ದೊರೆತಿದೆಯಾದರೂ ಭ್ರಷ್ಟಾಚಾರದ ಆರೋಪದಲ್ಲಿ ಮೂರು ವರ್ಷಗಳ ಶಿಕ್ಷೆಯನ್ನು ಅನುಭವಿಸುತ್ತಿರುವಾಗ ಅವರನ್ನ ಹೇಗೆ ಬಿಡುಗಡೆ ಮಾಡಲಾಯಿತು ಅನ್ನೋದು ಅಸ್ಪಷ್ಟವಾಗಿದೆ ಎಂದು ವಿರೋಧ ಪಕ್ಷಗಳ ನಾಯಕರು ಪ್ರತಿಕ್ರಿಯಿಸಿದ್ದಾರೆ.



Join Whatsapp