ಆಮದು ಸರ್ಕಾರದ ಬಹಿಷ್ಕಾರಕ್ಕೆ ಪಾಕ್ ಪ್ರಧಾನಿ ಕರೆ

Prasthutha|

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರುವ ಆಮದು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆಯ ಮೂಲಕ ಬಹಿಷ್ಕರಿಸುವಂತೆ ತನ್ನ ಬೆಂಬಲಿಗರಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕರೆ ನೀಡಿದ್ದಾರೆ.

- Advertisement -

ಈ ಕುರಿತು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ‘ನಾನು ಆಮದು ಸರ್ಕಾರವನ್ನು ಬಹಿಷ್ಕರಿಸುತ್ತೇನೆ. ನೂತನವಾಗಿ ರಚನೆಯಾಗುವ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತೇನೆ. ಪಾಕಿಸ್ತಾನದ ಪ್ರಜೆಗಳು ನನ್ನನ್ನು ಅಧಿಕಾರಕ್ಕೇರಿಸಿದ್ದಾರೆ ಮತ್ತು ಜನರ ನೆರವಿನಿಂದ ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಭಾನುವಾರ ಸಂಜೆ ನೂತನ ಆಮದು ಸರ್ಕಾರ ಅಸ್ತಿತ್ವಕ್ಕೆ ಬಂದಾಗ ನನ್ನ ಬೆಂಬಲಿಗರು ಅಲ್ಲಿಂದ ಹೊರ ಬರಬೇಕೆಂದು ಕರೆ ನೀಡಿದ್ದಾರೆ.

ತನ್ನ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿಯನ್ನು ತಿರಸ್ಕರಿಸಿದ ಉಪ ಸ್ಪೀಕರ್ ಖಾಸಿಮ್ ಸೂರಿ ಅವರ ನಿರ್ಧಾರದ ಬಗ್ಗೆ ನ್ಯಾಯಾಲಯದ ಅದೇಶದ ಹಿನ್ನೆಲೆಯಲ್ಲಿ ಅವರು ತೀವ್ರ ಅಸಮಾಧಾನವನ್ನು ಪ್ರಕಟಿಸಿದ್ದಾರೆ.

- Advertisement -

ಚುನಾವಣೆ ಘೋಷಿಸುವಂತೆ ಆಗ್ರಹಿಸುತ್ತಿರುವ ವಿರೋಧ ಪಕ್ಷಗಳ ನಡೆಯನ್ನು ಛೇಡಿಸಿದ ಇಮ್ರಾನ್ ಖಾನ್, ಜನರು ನೂತನ ಸರ್ಕಾರವನ್ನು ಆಯ್ಕೆ ಮಾಡಬೇಕೆಂದೆ ಅಸೆಂಬ್ಲಿಯನ್ನು ವಿಸರ್ಜಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಶಾಂತಿಯುತ ಹೋರಾಟಕ್ಕೆ ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

Join Whatsapp