Home ಟಾಪ್ ಸುದ್ದಿಗಳು ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್​ಆರ್​ಟಿಸಿ ಬಸ್ಸಿನ ಗ್ಲಾಸ್ ಒಡೆದು, ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.

ನಿನ್ನೆ(ಜು.7) ಸಂಜೆ ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು KSRTC ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ನಾಲ್ವರು ಪುಂಡರ ವಿರುದ್ಧ ಪ್ರಕರಣ ದಾಖಲು

ಇನ್ನು ಘಟನೆ ವೇಳೆ ನಾಲ್ವರು ಮಧ್ಯ ಸೇವಿಸಿದ್ದು, ಅದರ ಅಮಲಿನಲ್ಲಿದ್ದ ಪುಂಡರು ಬಸ್ಸಿನ ಗ್ಲಾಸ್ ಒಡೆಯುವುದರ ಜೊತೆಗೆ ಪ್ರಶ್ನೆ ಮಾಡಿದ ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕನನ್ನ ಬೀರೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಲಿಸುತ್ತಿದ್ದ ಬಸ್ಸಿನ ಮೇಲೆ ಗಾಜಿನ ಬಾಟಲಿ ಎಸೆದ ನಾಲ್ವರ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ. ಇನ್ನು ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

Join Whatsapp
Exit mobile version