ಏಕಕಾಲದಲ್ಲಿ 9 ಮಂದಿ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ

Prasthutha|

ನವದೆಹಲಿ: ಮೂವರು ಮಹಿಳಾ ನ್ಯಾಯಾಧೀಶರು ಸೇರಿದಂತೆ 9 ಮಂದಿ ನೂತನ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಮಂಗಳವಾರ ಬೆಳಿಗ್ಗೆ ಪ್ರಮಾಣವಚನ ಬೋಧಿಸಿದರು. ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅತ್ಯುನ್ನತ ನ್ಯಾಯಾಲಯಕ್ಕೆ 9 ಮಂದಿ ನ್ಯಾಯಾಧೀಶರು ಮೇಲ್ದರ್ಜೆಗೇರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

- Advertisement -

ನ್ಯಾಯಾಲಯದ ಹೆಚ್ಚುವರಿ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ಈ ಸಮಾರಂಭವನ್ನು ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ಈ ಕಾರ್ಯಕ್ರಮವನ್ನು ಮುಖ್ಯ ನ್ಯಾಯಾಧೀಶರ ಕೊಠಡಿಯಲ್ಲಿ ನಿರ್ವಹಿಸಲಾಗುತ್ತದೆ.

ಪ್ರಸಕ್ತ ನೂತನ ನ್ಯಾಯಾಧೀಶರಾದ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ (ಕರ್ನಾಟಕ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ), ನ್ಯಾಯಮೂರ್ತಿ ವಿಕ್ರಮ್ ನಾಥ್ (ಗುಜರಾತ್ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಾಧೀಶರು), ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ (ಸಿಕ್ಕಿಂ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ), ನ್ಯಾಯಮೂರ್ತಿ ಹಿಮಾ ಕೊಹ್ಲಿ (ತೆಲಂಗಾಣ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ), ನ್ಯಾಯಮೂರ್ತಿ ನಾಗರತ್ನ(ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿದ್ದರು), ನ್ಯಾಯಮೂರ್ತಿ ಸಿ.ಟಿ ರವಿಕುಮಾರ್(ಕೇರಳ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು), ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್( ಮದ್ರಾಸ್ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು), ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ (ಗುಜರಾತ್ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು), ನ್ಯಾಯಮೂರ್ತಿ ಪಿ.ಎಸ್. ನರಸಿಂಹ (ಹಿರಿಯ ವಕೀಲರು ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ) ಅವರ ತಂಡ ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

- Advertisement -

ನೂತನವಾಗಿ ಸೇರ್ಪಡೆಯಾದ 9 ಮಂದಿ ನ್ಯಾಯಾದೀಶರೊಂದಿಗೆ ಸುಪ್ರೀಂ ಕೋರ್ಟ್ ನ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ.

Join Whatsapp